
03/04/2025
ದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನ-1 ರ ಕಟ್ಟಡವನ್ನು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಜೊತೆಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಮಾಹಿತಿ ಕೇಂದ್ರವನ್ನು ಮಾನ್ಯರು ಉದ್ಘಾಟಿಸಿದರು.
ಈ ಸಮಾರಂಭದಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಶ್ರೀ ಕೆ.ಎಚ್. ಮುನಿಯಪ್ಪ ರವರು, ಗೌರವಾನ್ವಿತ KSTDC ಅಧ್ಯಕ್ಷರದ ಶ್ರೀ ಶ್ರೀನಿವಾಸ್ ರವರು, ಸರ್ಕಾರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜಿನೀಶ್ (I.A.S) , ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.